Karnataka News Live: ಚಿನ್ನಸ್ವಾಮಿ ಕಾಲ್ತುಳಿತದ ಬೆನ್ನಲ್ಲೇ UEFA ನೇಷನ್ ಲೀಗ್‌ನಲ್ಲಿ ಅವಘಡ, ಓರ್ವ ಅಭಿಮಾನಿ ಸಾವು
Jun 10 2025, 07:37 AM ISTಬೆಂಗಳೂರು (ಜೂ.10) : ರಾಜ್ಯನ ರಾಜಕಾರಣದಲ್ಲಿ ಸಂಭವಿಸಿದ ದಿಢೀರ್ ಬೆಳವಣಿಗೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಸರ್ಕಾರದ ಇಮೇಜ್ ವೃದ್ಧಿಸಲು ಸಚಿವ ಸಂಪುಟ ಪುನಾರಚನೆಗೆ ಸೂಚನೆ ನೀಡಿದ್ದು, ಇಂದು ಬೆಳಗ್ಗೆ 11ಕ್ಕೆ ದೆಹಲಿಯಲ್ಲಿ ರಾಜ್ಯ ನಾಯಕರೊಂದಿಗೆ ಖುದ್ದು ವರಿಷ್ಠ ರಾಹುಲ್ ಗಾಂಧಿ ಚರ್ಚೆ ನಡೆಸಲಿದ್ದಾರೆ.ದೆಹಲಿಯಲ್ಲಿ ನಡೆಯಲಿರುವ ಈ ಸಭೆಗೆ ಆಗಮಿಸುವಂತೆ ಹೈಕಮಾಂಡ್ ರಾಜ್ಯ ನಾಯಕತ್ವಕ್ಕೆ ಬುಲಾವ್ ನೀಡಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ದೆಹಲಿಗೆ ತೆರಳಲಿದ್ದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ದೆಹಲಿಯಲ್ಲಿ ಇದ್ದಾರೆ. ಈ ನಾಯಕರೊಂದಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವರಿಷ್ಠರಾದ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಚರ್ಚೆ ನಡೆಸಲಿದ್ದಾರೆ.ಹಾಲಿ ಸಚಿವ ಸಂಪುಟದ 8 ರಿಂದ 10 ಸಚಿವರು ಉತ್ತಮ ಆಡಳಿತ ನೀಡುವ ಬಗ್ಗೆ ಗಮನ ಕೊಡುತ್ತಿಲ್ಲ. ಈ ಸಚಿವರು ವಿಧಾನಸೌಧದತ್ತ ತಲೆಹಾಕುತ್ತಿಲ್ಲ ಎಂಬ ವರದಿಗಳು ಹೈಕಮಾಂಡ್ ಮುಟ್ಟಿವೆ. ಅಲ್ಲದೆ, ಸಂಪುಟದ ಕೆಲ ಹಿರಿಯ ಸಚಿವರಿಗೂ ಕೊಕ್ ನೀಡಿ, ಪಕ್ಷದ ಕೆಲಸದಲ್ಲಿ ತೊಡಗಿಕೊಳ್ಳುವಂತೆ ಮಾಡುವ ಇರಾದೆಯೂ ಹೈಕಮಾಂಡ್‌ಗೆ ಇದೆ ಎನ್ನಲಾಗಿದೆ.